*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್*
*ರಾಜ್ಯಾದ್ಯಂತ* ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಎದುರಾಗಿದ್ದು, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಎಚ್ ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಬಾಗಲಕೋಟೆ ಡಿಸಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿಗೂ ಲೋಕಾಯುಕ್ತ ಶಾಕ್ ನೀಡಿದೆ. ಬಳ್ಳಾರಿ ಪಿಡಬ್ಲೂಡಿ ಸುಪರಿಂಟೆಂಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಉಡುಪಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ ಎಂದು ವರದಿಯಾಗಿದೆ.