*ಪಶ್ಚಿಮ ಘಟ್ಟm*ಜೂ. 15ರಿಂದ ಸೆ.30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.

*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್ * ಉಡುಪಿ: ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟದಿಂದ ರಸ್ತೆಬದಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆಯಲ್ಲಿ ಜೂ. 15 ರಿಂದ ಸೆ. 30 ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
PGK

Post a Comment

Previous Post Next Post