*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್ * ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.