*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*4000 ಕೋಟಿ ರೂ. ಮೌಲ್ಯದ 120 ಎಕರೆ ಅರಣ್ಯ ಭೂಮಿ ಮರು ವಶ*


*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*
 ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್ ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.
PGK

Post a Comment

Previous Post Next Post