*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್ * ಕಾರವಾರ/:ಸಿದ್ದಾಪುರ- ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಸಿದ್ದಾಪುರ-ಕುಮಟಾ ಮಾರ್ಗದ ದೊಡ್ಮನೆ ಘಟ್ಟದಲ್ಲಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗಾಳಿ, ಮಳೆ ಜೋರಾದ ಬೆನ್ಮಲ್ಲೇ ಸಿದ್ದಾಪುರ ಬಡಾಳ ಕುಮಟಾ ಮಾರ್ಗದ ದೊಡ್ಮನೆ ಘಟ್ಟ ಪ್ರದೇಶದ ಬಳಿ ರಾಜ್ಯ ಹೆದ್ದಾರಿಗೆ ಬೃಹದಾಕಾರದ ಮರ ಉರುಳಿ ಬಿದ್ದಿದೆ. ಇದರಿಂದ ಎರಡು ಬದಿ ಸಂಪರ್ಕ ಕಡಿತಗೊಂಡಿದ್ದು, ಸಾರಿಗೆ ಬಸ್ ಸೇರಿದಂತೆ ಹಲವು ವಾಹನಗಳು ಘಟ್ಟ ಪ್ರದೇಶದಲ್ಲಿಯೇ ಸಾಲುಗಟ್ಟಿವೆ.
ಸುಮಾರು 10-30 ರ ವೇಳೆ ಈ ಬೃಹತ್ ಮರ ಬಿದ್ದಿದೆ ಎನ್ನಲಾಗಿದೆ. ಇದೇ ಸಮಯದಲ್ಲಿ ಕುಮಟಾ ಸಾಗರ ಬಸ್ ಸಂಚಾರ ಮಾಡಿದ್ದು, ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ನಂತರ ಬಂದ ಎಲ್ಲ ವಾಹನಗಳು ಎರಡು ಬದಿ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ.