ಉತ್ತರ ಕನ್ನಡ ಜು.25: ಯಲ್ಲಾಪುರ ಜಿಲ್ಲೆಯಾದ್ಯಂತ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗೆ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಯಲ್ಲಾಪುರ ತಾಲೂಕಿನ ನಗರ ಹಾಗೂ ಜಿಲ್ಲಾ ಪ್ರಮುಖ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ 93ರ ರಸ್ತೆ ಕಿತ್ತು ಹೋಗಿ ಹೊಂಡ ಗುಂಡಿಗಳಿಂದ ತುಂಬಿ ಹೋಗಿವೆ. ಇದರಿಂದ ವಾಹನ ಸಂಚಾರಕ್ಕೆ ಬಹಳಷ್ಟು ತೊಡಕಾಗಿದೆ.
ಮಳೆಗಾಲಕ್ಕೆ ಮೊದಲು ಬೇಸಿಗೆಯಲ್ಲಿ ಅಂದರೆ ಎರಡು ಮೂರು ತಿಂಗಳ ಹಿಂದೆಯಷ್ಟೇ ಜಿಲ್ಲಾ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆಗಳಿಗೆ ತೇಪೆ ಹಾಕುವ ಕಾರ್ಯ ಮಾಡ ಲಾಗಿತ್ತು. ಆದರೆ ಈ ಬಾರಿ ಸುರಿದ ನಿರಂತರ ಮಳೆಯಿಂದಾಗಿ ಇಲ್ಲಿನ ಡಾಮರುಗಳು ಕಿತ್ತು ಹೋಗಿ ಮತ್ತೆ ಹೊಂಡಮಯವಾಗಿವೆ.