ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಧರ್ಮಸ್ಥಳ ಸರಣಿ ಸಮಾಧಿ ಪ್ರಕರಣ ಸರಕಾರ SIT ರಚಿಸಿ ಆದೇಶ*

*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್*

*ಬೆಂಗಳೂರು*:ಧರ್ಮಸ್ಥಳ ಸರಣಿ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಜುಲೈ 20, 2025 ರಂದು ವಿಶೇಷ ತನಿಖಾ ತಂಡ(SIT)ರಚನೆ ಮಾಡಿ ಆದೇಶ ಹೊರಡಿಸಿದೆ.ಡೈರೆಕ್ಟರ್ ಜನರಲ್ ಆಫ್ ಪೊಲೀಸ್(ಆಂತರಿಕ ಭದ್ರತಾ ವಿಭಾಗ)ಪ್ರಣವ್ ಮೊಹಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು,ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್(ನೇಮಕಾತಿ)ಎಂ.ಎನ್. ಅನುಚೇತ್, ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಸಿಟಿ ಆರ್ಮ್ಡ್ ರಿಸರ್ವ್ ಹೆಡ್‌ಕ್ವಾರ್ಟರ್ಸ್)ಸೌಮ್ಯಲತಾ, ಮತ್ತು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಆಂತರಿಕ ಭದ್ರತಾ ವಿಭಾಗ)ಜಿತೇಂದ್ರ ಕುಮಾರ್ ಸೇರಿದ್ದಾರೆ.SIT ತಂಡವು ದ.ಕ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸಲಿದೆ.
ಈ ತನಿಖೆಯು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ರಾಜ್ಯಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಥವಾ ದಾಖಲಾಗಬಹುದಾದ ಎಲ್ಲಾ ಪ್ರಕರಣಗಳನ್ನು ಒಳಗೊಂಡಿರುತ್ತದೆ ಎಂದು ತಿಳಿದು ಬಂದಿದೆ.ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು,ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾದ ಮಹಿಳೆಯರು, ವಿದ್ಯಾರ್ಥಿನಿಯರು,ಅಸ್ವಾಭಾವಿಕ ಸಾವು,ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ತನಿಖೆಗೆ SIT ರಚನೆಗೆ ಮುಖ್ಯಮಂತ್ರಿಯವರಲ್ಲಿ ಮನವಿಸಿದ್ದರು.
PGK

Post a Comment

Previous Post Next Post