*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ *ಧರ್ಮಸ್ಥಳ| ದೂರುದಾರ ಗುರುತಿಸಿದ ಸ್ಥಳದಲ್ಲಿ ಹರಿದ ಕೆಂಪು ಬ್ಲೌಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆ; ಸುಜಾತಾ ಭಟ್ ಪರ ವಕೀಲರು.

*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್*
   ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್‌ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ದಾರಿ ತೆರೆದಿದೆ. ನಿನ್ನೆ ಮಂಗಳವಾರದ ಕಾರ್ಯಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ತನಿಖೆಗೆ ಹೊಸ ಆಯಾಮ ನೀಡಿದೆ ಎಂದು ಅವರು ಹೇಳಿದ್ದಾರೆ
PGK

Post a Comment

Previous Post Next Post