ಶಿರಸಿ: ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ನಾಗರಾಜ ನಾಯ್ಕ ಇವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಇವರು ನಾಗರಾಜ ನಾಯ್ಕ ಅವರನ್ನು ರಾಜ್ಯ ಸಂಘದ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಶಿರಸಿಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಆಗಿರುವ ನಾಗರಾಜ ನಾಯ್ಕ ಅವರು ಇಲಾಖೆಯಲ್ಲಿ ತಮ್ಮ ಉತ್ತಮ ಕಾರ್ಯನಿರ್ವಹಣೆ ಮತ್ತು ಬದ್ಧತೆಯಿಂದ ಹೆಸರುವಾಸಿಯಾಗಿದ್ದಾರೆ. ಅವರ ಈ ಸೇವಾ ಹಿನ್ನೆಲೆ ಮತ್ತು ದಕ್ಷತೆಯನ್ನು ಗುರುತಿಸಿ ರಾಜ್ಯ ಸಂಘದ ಮಹತ್ವದ ಹುದ್ದೆಗೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆಯು ರಾಜ್ಯ ಸರ್ಕಾರಿ ನೌಕರರ ವಲಯದಲ್ಲಿ ಸಂತಸ ತಂದಿದೆ.