*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್* ಉಡುಪಿ ಆರ್.ಟಿ.ಓ. ಲಕ್ಷ್ಮೀನಾರಾಯಣ್ ಮನೆ ಮೇಲೆ ಲೋಕಾಯುಕ್ತ ದಾಳಿ!

*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*  ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್ ನೀಡಿದ್ದು , ಉಡುಪಿ ಜಿಲ್ಲಾ ಆರ್.ಟಿ.ಒ ಅಧಿಕಾರಿ ಲಕ್ಷ್ಮೀನಾರಾಯಣ್ ಪಿ ನಾಯ್ಕ್ , ಬ್ರೋಕರ್ ರವಿ ಮನೆ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲಕ್ಷ್ಮೀನಾರಾಯಣ್ ಅವರ ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿರುವ ಫ್ಲಾಟ್ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ ಕುಮಟಾ ಮತ್ತು ಪಡು ಅಳೆವೂರಿನ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದೆ.
ಅಲ್ಲದೆ ಅಲೆವೂರಿನಲ್ಲಿರುವ ಬ್ರೋಕರ್ ರವಿ ಮನೆ – ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು ಶೋಧ ಕಾರ್ಯ ನಡೆಸಲಾಗುತ್ತಿದೆ.
ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ದವರಾಗಿರುವ ಲಕ್ಷ್ಮೀನಾರಾಯಣ ಅವರ ಮೇಲೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.

PGK

Post a Comment

Previous Post Next Post