*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್*
ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.
ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ವೃಕ್ಷಮಾತೆಯನ್ನು ಕಳೆದುಕೊಂಡು ಪರಿಸರ ಲೋಕ ಅನಾಥವಾಗಿದೆ.
114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮಕ್ಕಳಿಲ್ಲ ತಿಮ್ಮಕ್ಕನನ್ನು ಸಾಕು ಮಗ ಉಮೇಶ್ ಬಳ್ಳೂರು ನೋಡಿಕೊಳ್ಳುತ್ತಿದ್ದರು.