ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್. ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ಅರಣ್ಯ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಅಪಘಾತ (ಮರಣ) ವಿಮೆ ನೀಡುವುದಾಗಿ ಈಶ್ವರ್ ಖಂಡ್ರೆ ಪ್ರಕಟಿಸಿದ್ದಾರೆ.
ಅರಣ್ಯ ಇಲಾಖೆಯ ಖಾಯಂ ಅಧಿಕಾರಿಗಳಿಗೆ ಒಂದು ಕೋಟಿ ರೂ. ಅಪಘಾತ (ಮರಣ) ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು ಅಪಾಯ ಎದುರಿಸಿ ಹಗಲಿರುಳು ಶ್ರಮಿಸುತ್ತಿದ್ದು, ಇಲಾಖೆ ಕೆಲವು ಶೌರ್ಯಶಾಲಿ ಹಸಿರು ಯೋಧರನ್ನು ಕಳೆದುಕೊಂಡಿದೆ. ಇವರೆಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಈ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ವರದಿ/ ರಾಘವೇಂದ್ರ ಸಂಪೋಡಿ.