*ಪಶ್ಚಿಮ ಘಟ್ಟ ವಾಯ್ಸ್ ಡೆಲ್ಲಿ ನ್ಯೂಸ್*: ಶಿಕಾರಿಪುರ:1 ಲಕ್ಷ ರೂ. ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

*ಪಶ್ಚಿಮ ಘಟ್ಟ ವಾಯ್ಸ್ ಡೆಲ್ಲಿ ನ್ಯೂಸ್*: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಶಿಕಾರಿಪುರದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು.
ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
PGK

Post a Comment

Previous Post Next Post