*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್: ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ.

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:
 ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರಕಾರ ಆದೇಶಿದೆ.
ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮಿಷನ‌ರ್ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಫೆ.1, 2024 ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರ ತೆರವಾದ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ನಿಯೋಜಿಸಿ ಸರಕಾರ ಆದೇಶಿಸಿದೆ.
ಅವರು ಪ್ರಸ್ತುತ ಕರ್ನಾಟಕದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಮತ್ತು ಬೆಂಗಳೂರಿನಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
PGK

Post a Comment

Previous Post Next Post