*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* . ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾ ದಾಳಿ: ತಬ್ಬಿಬ್ಬಾದ ಸಿಬ್ಬಂದಿ
ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಶಿವಮೊಗ್ಗ ನಗರ ಪಾಲಿಕೆ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗದ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಮಹಾನಗರ ಪಾಲಿಕೆ ಸಿಬ್ಬಂದಿ ತಬ್ಬಿಬ್ಬಾದರು.
ವಿಲೇವಾರಿಯಾಗದೇ ಇರುವ ಅರ್ಜಿಗಳನ್ನ ಅಧಿಕಾರಿಗಳು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೆಳಗ್ಗೆ 11 ಗಂಟೆಯಾದರೂ ಅಧಿಕಾರಿಗಳು ಕಚೇರಿಗಳ ಬೀಗ ಹುಡುಕುತ್ತಿರುವುದು ನೋಡಿ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡರು. ಮಹಾನಗರ ಪಾಲಿಕೆ ಸಿಬ್ಬಂದಿ ಐಡಿ ಕಾರ್ಡ್ ಹಾಕದೆ ಇರುವುದಕ್ಕೂ ತರಾಟೆ ತೆಗೆದುಕೊಂಡರು. ದಿನನಿತ್ಯ ನಿರ್ವಹಿಸುವ ಕಾರ್ಯದ ಬಗ್ಗೆ ಮಾಹಿತಿ ಇಲ್ಲದೆ ಸಿಬ್ಬಂದಿ ಪರದಾಡಿದರು. ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಗೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.