ದಿನಾಂಕ 31.12.2025 ರಂದು ಕಾರವಾರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಯ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ ಅದರಂತೆ ದಿನಾಂಕ 10.01.2026 ರಂದು ಮಂಗಳೂರಿನಲ್ಲಿ ನಡೆದ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ನೂತನ ಪ್ರವಾಸೋದ್ಯಮ ನೀತಿ ಜಾರಿ ಕುರಿತಾದ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಅಧಿಕೃತವಾಗಿ ಸಲಹೆಗಳನ್ನು ಸೂಚನೆ ಗಳನ್ನು ನೀಡಿದೆನು.
ಜಿಲ್ಲೆಯ ಪ್ರವಾಸೋದ್ಯಮದ ಸರ್ವತೋಮುಖ ಏಳಿಗೆಗೆ ಅತ್ಯಗತ್ಯವಾದ ಮಹತ್ವದ ಅಂಶಗಳನ್ನು ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಕೋರಿ ಮಾನ್ಯ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯನ್ನು ಪತ್ರದ ಮೂಲಕ ಸಲ್ಲಿಸಿರುತ್ತೇನೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಪತ್ರದಲ್ಲಿ ಸವಿಸ್ತಾರವಾಗಿ ವಿವರಿಸಲಾಗಿದೆ. ಈ ಕುರಿತು ಸಭೆಯಲ್ಲಿ ಪಾಲ್ಗೊಂಡು ಸರಕಾರದ ಹಿರಿಯ ಅಧಿಕಾರಿಗಳು ಸಚಿವರುಗಳೊಂದಿಗೆ ಸಲಹೆ ಸೂಚನೆಗಳನ್ನು ಚರ್ಚಿಸಿರುತ್ತೇನೆ.
*ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದರು ಉತ್ತರ ಕನ್ನಡ*