*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್*ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಹಾವೇರಿ: ಖಾತೆ ಬದಲಾವಣೆಗಾಗಿ 8,500 ರೂ. ಲಂಚ (Bribe) ಸ್ವೀಕಾರ ಮಾಡುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ (Village Accountant) ಲೋಕಾಯುಕ್ತದ (Lokayukta) ಬಲೆಗೆ ಬಿದ್ದಿರುವ ಘಟನೆ ಹಾವೇರಿ (Haveri) ತಾಲೂಕಿನ ನೆಗಳೂರು ಗ್ರಾಮದ ಕಚೇರಿಯಲ್ಲಿ ನಡೆದಿದೆ.
ಪಕ್ಕೀರೇಶ ಬಾರ್ಕಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ಪಕ್ಕೀರೇಶ ಬಸಾಪುರ ಗ್ರಾಮದ ರೈತ ಕರಿಯಲ್ಲಪ್ಪ ಕೆಸರಳ್ಳಿ ಎಂಬವರ ಬಳಿ ಖಾತೆ ಬದಲಾವಣೆಗೆ 63,000 ರೂ.ಗೆ ಬೇಡಿಕೆ ಇಟ್ಟಿದ್ದ. 30 ಸಾವಿರ ಹಣ ಮೊದಲೇ ಕೊಟ್ಟಿದ್ದರು. ಇಂದು 8,500 ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. 
PGK

Post a Comment

Previous Post Next Post