*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಮಂಗಳೂರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನೆ ನಡೆಸಿ ಪ್ರಾಂಶುಪಾಲರ ವಿರುದ ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯು ಕ್ಯಾಂಪಸ್‌ನಲ್ಲಿ ಮುಂಬರುವ ವಿದ್ಯಾರ್ಥಿ ಚುನಾವಣೆಗೂ ಮುನ್ನವೇ ತೀವ್ರ ಆತಂಕ ಸೃಷ್ಟಿಸಿದ್ದು, ಪೋಷಕರಲ್ಲಿ ಕಳವಳ ಮೂಡಿಸಿದೆ.: ಈ ಹಿಂದೆ ಕಾಲೇಜು ಚುನಾವಣೆ ಎಂದು ಹೇಳಿಕೊಂಡು ವಿದ್ಯಾರ್ಥಿಗಳ ನಡುವೆ ದೊಡ್ಡ ಜಗಳಗಳು ನಡೆಯುತ್ತಿತ್ತು. ಇದೀಗ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ ಮಾರ್ಪಟ್ಟಿದೆ. ವರದಿ: ಮಹೇಶ್ ಮಾಣಿ. ಮಂಗಳೂರು
PGK

Post a Comment

Previous Post Next Post