*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

*ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್* ಬೆಂಗಳೂರು, ಮಾ30.: ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. IOC, HP, GAIL ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್ನಲ್ಲಿ ಮಾರಾಟ ಮಾಡುವುದನ್ನು ಹಾಗೂ ಅಧಿಕೃತವಲ್ಲದ ಮಾರುಕಟ್ಟೆಗೆ ಸಿಲಿಂಡರ್‌ಗಳು ಹೋಗುವುದನ್ನು ತಡೆಯಲು ಕೇಂದ್ರವು ನಿರ್ಣಯ ಕೈಗೊಂಡಿದೆ. ಅದರಂತೆ, ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ. ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಮತ್ತು ಮುಂದಿನ ದಿನಗಳಲ್ಲಿ GAIL ಪೈಪ್‌ಲೈನ್ ಮೂಲಕ ಹೆಚ್ಚಿನ ಪೂರೈಕೆಗೆ ಅವಕಾಶವಾಗಲಿದೆ. ಈ ಹೆಚ್ಚುವರಿ ಪೂರೈಕೆಯು ರಾಜ್ಯದಲ್ಲಿ ವಾಣಿಜ್ಯ ಬಳಕೆದಾರರ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ. ಸದ್ಯಕ್ಕೆ, ರಾಜ್ಯದಲ್ಲಿ ಸುಮಾರು 15,000 ರಿಂದ 16,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆ ಇದೆ ಎಂದು ಅಂದಾಜಿಸಲಾಗಿದೆ.
PGK

Post a Comment

Previous Post Next Post