*ಶಿರಸಿ*: ಸಂವಿಧಾನ ಶಿಲ್ಪಿ, "ಭಾರತ ರತ್ನ" ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಬುದ್ಧ ಬಸವರಿಬ್ಬರ ಪರಂಪರೆ ಮುಂದುವರಿಸಿದ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ,ಅವರು ಇಡೀ ರಾಷ್ಟ್ರದ ಆಸ್ತಿ. ಸಮಾಜದಲ್ಲಿ ಹಾಸುಹೊಕ್ಕಿದ್ದ ಜಾತಿ ಪದ್ಧತಿಯ ಅಸಮಾನತೆ ಮತ್ತು ಶೋಷಣೆಯ ವಿರುದ್ಧ ಅವರು ನಡೆಸಿದ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದರು.ಈ ಸಂದರ್ಭದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ರಾಷ್ಟ್ರೀಯ ದಲಿತ ಸಮಿತಿ ಅನೇಕ ಸಂಘಟನೆಯ ನಾಯಕರು ಉಪಸ್ಥಿತರಿದ್ದರು.