(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು.

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಸುಬ್ಬಮ್ಮ (65) ಮೃತ ದುರ್ದೈವಿ. ಬೆಳಗ್ಗೆ ಸೊಪ್ಪು ತರುವುದಾಗಿ ಹೇಳಿ ಹೋಗಿದ್ದ ಸುಬ್ಬಮ್ಮ

ಅವರು ಸಂಜೆಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆಸಿದ್ದರು. ಸಂಜೆ ಹೇಮಾವತಿ ನದಿಯಲ್ಲಿ ಸುಬ್ಬಮ್ಮ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಮಾಜ ಸೇವಕ ಆರೀಫ್ ತಂಡ ಮೇಲೆತ್ತಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಡಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
 ವರದಿ:-ನಾಗೇಶ್ ಚಿಕ್ಕಮಂಗಳೂರು 
PGK

Post a Comment

Previous Post Next Post