(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ದಾವಣಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ಕವಾಡ ಮೀಸಲು ಅರಣ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಕಬ್ಬಿಣದ ಅದಿರು ದಂಧೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಕುಕ್ಕವಾಡ ಅರಣ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಾಲ್ವರ ಬಂಧನ
ಅಕ್ರಮ ಗಣಿಗಾರಿಕೆ ಮತ್ತು ಸಾಗಾಟದಲ್ಲಿ ತೊಡಗಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ ಘಟನೆ ದಾವನಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ರವಾಡ ಮೀಸಲು ಅರಣ್ಯದಲ್ಲಿ ನಡೆದಿದೆ.
ಅರಣ್ಯದಲ್ಲಿ ಕಬ್ಬಿಣದ ಅದಿರು ಅಕ್ರಮ ಸಾಗಾಟ
ಆರೋಪಿಗಳು ಮೀಸಲು ಅರಣ್ಯ ಪ್ರದೇಶದಲ್ಲೇ ಕಬ್ಬಿಣದ ಅದಿರು ಕಲ್ಲುಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಬಳಿಕ ಅವುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದರು. ಹಲವು ದಿನಗಳಿಂದ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ.
ಕಾನೂನುಬಾಹಿರವಾಗಿ ಸಂಗ್ರಹಿಸಿದ ಅದಿರು ಕಲ್ಲುಗಳನ್ನು ಟ್ರ್ಯಾಕ್ಟರ್ ಮತ್ತು ಟ್ರೈಲರ್ ಮೂಲಕ ಸಾಗಿಸಿ ಮಾರಾಟ ಮಾಡಲು ಐವರು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ನಡೆದಿದ್ದು, ಆರೋಪಿಗಳ ಯೋಜನೆ ವಿಫಲವಾಗಿದೆ.
ವರದಿ:- ದಾವಣಗೆರೆ ರಾಜು